Wednesday, June 16, 2021
No menu items!
Home Karnataka ಸಿಗಂದೂರು ದೇವಾಲಯದಲ್ಲಿ ಎರಡು ಬಣಗಳ ನಡುವೆ ಗಲಾಟೆ, ಹಲ್ಲೆ..!

ಸಿಗಂದೂರು ದೇವಾಲಯದಲ್ಲಿ ಎರಡು ಬಣಗಳ ನಡುವೆ ಗಲಾಟೆ, ಹಲ್ಲೆ..!

ಶಿವಮೊಗ್ಗ : ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ಧರ್ಮದರ್ಶಿ ರಾಮಪ್ಪ ಬೆಂಬಲಿಗರ ಮೇಲೆ ಪ್ರಧಾನ ಅರ್ಚಕ ಶೇಷಗಿರಿ ಭಟ್ಟರ ಬೆಂಬಲಿಗರಿಂದ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಎರಡು ಬಣಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಅದು ಅತಿರೇಕಕ್ಕೆ ತಿರುಗಿ ಹಲ್ಲೆ ನಡೆದಿದೆ ಎನ್ನಲಾಗಿದೆ.

ದೇವಾಲಯಕ್ಕೆ ಪೂಜೆ ಮಾಡಿಸಲು ಹೋದ ಮಂಜಯ್ಯ ಜೈನ್ ಎಂಬುವರ ಮೇಲೆ ಶೇಷಗಿರಿ ಭಟ್ಟರ ಸಹೋದರರು ಹಲ್ಲೆ ನಡೆಸಿದ್ದು, ಈ ವೇಳೆ ದೇವಾಲಯದ ಆಡಳಿತ ಕಚೇರಿಯ ಗ್ಲಾಸ್ ಗಳು, ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ ಎಂದು ತಿಳಿದುಬಂದಿದೆ.

ಇಷ್ಟಲ್ಲಾ ಘಟನೆಗಳು ನಡೆದರು, ಪೊಲೀಸರು ಸಮಾಧಾನ ಮಾಡಿದರು ಸಹ ಎರಡು ಬಣಗಳ ಮಾತಿನ ಚಕಮಕಿ ಇನ್ನೂ ಮುಂದುವರಿದಿದೆ ಎನ್ನಲಾಗುತ್ತಿದೆ. ಸದ್ಯ ದೇವಾಲಯದ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments