Monday, June 14, 2021
No menu items!
Home Bharata ಗಡಿಯಲ್ಲಿ ಒಳನುಸುಳಲು ಯತ್ನಿಸಿದ ಉಗ್ರರನ್ನ ಹೆಡೆಮುರಿ ಕಟ್ಟಿದ ಭಾರತೀಯ ಸೇನೆ

ಗಡಿಯಲ್ಲಿ ಒಳನುಸುಳಲು ಯತ್ನಿಸಿದ ಉಗ್ರರನ್ನ ಹೆಡೆಮುರಿ ಕಟ್ಟಿದ ಭಾರತೀಯ ಸೇನೆ

ಜಮ್ಮು – ಕಾಶ್ಮೀರ: ಇಲ್ಲಿನ ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಉಗ್ರರು ಒಳನುಸಳಲು ವಿಫಲ ಪ್ರಯತ್ನ ನಡೆಸಿದ್ದು, ಭದ್ರತಾ ಪಡೆಗಳು ಒಬ್ಬ ಉಗ್ರ ನನ್ನ ಹತ್ಯೆ ಮಾಡಿರುವುದಾಗಿ ವರದಿಯಾಗಿದೆ.

ಇಂದು ಮುಂಜಾನೆ ಸುಮಾರು ಒಂದು ಗಂಟೆಯ ಸಮಯದಲ್ಲಿ ಅಪರಿಚಿತ ವ್ಯಕ್ತಿಗಳು ಸಂಶಯಾಸ್ಪದ ರೀತಿಯಲ್ಲಿ ಓಡಾಡುತ್ತಿರುವುದು ಕಂಡು ಬಂದಿದೆ. ಅವರಿಗೆ ಕೂಡಲೇ ಶರಣಾಗುವಂತೆ ಭದ್ರತಾ ಪಡೆಗಳು ತಿಳಿಸಿವೆ. ಆದರೆ ಶರಣಾಗತಿಯನ್ನು ನಿರಾಕರಿಸಿದ ನುಸುಳುಕೋರರು ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿಯಾಗಿ ಭದ್ರತಾ ಪಡೆಯ ಸೈನಿಕರು ಗುಂಡಿನ ದಾಳಿ ನಡೆಸಿ ಒಬ್ಬ ಉಗ್ರ ನನ್ನು ಹತ್ಯೆ ಮಾಡಲಾಗಿದೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.

ಗಸ್ತು ಪಡೆಯು ಶನಿವಾರ ಮಧ್ಯರಾತ್ರಿ ಮಚಿಲ ಸೆಕ್ಟರ್‌ನ ಗಡಿ ಭಾಗದಲ್ಲಿ ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿದೆ.ಈ ವೇಳೆ ಒಳನುಸುಳಲು ಯತ್ನಿಸುತ್ತಿದ್ದ ಉಗ್ರರು ಮತ್ತು ಗಸ್ತು ಪಡೆ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಒಬ್ಬ ಉಗ್ರ ಹತನಾಗಿದ್ದಾನೆ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ಮಾಹಿತಿ ನೀಡಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಓರ್ವ ಪೊಲೀಸ್ ಪೇದೆ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದ್ದು, ಕಾರ್ಯಾಚರಣೆಯಲ್ಲಿ ನಿರತರಾಗಿದ್ದ ಸುದೀಪ್ ಸರ್ಕಾರ ಎಂಬ ಪೇದೆ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ. ಕಾರ್ಯಾಚರಣೆ ಮುಂದುವರೆದಿದ್ದು, ಸುತ್ತಮುತ್ತಲ ಗ್ರಾಮದಲ್ಲಿ ತೀವ್ರ ಶೋಧ ಕಾರ್ಯ ನಡೆಸಲಾಗುತ್ತಿದೆ. ಕಾರ್ಯಾಚರಣೆಯಲ್ಲಿ ಒಂದು ಎಕೆ 47 ಗನ್ ಮತ್ತು ಎರಡು ಬ್ಯಾಗ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments