Saturday, December 4, 2021
No menu items!
Home Latest 31ನೇ ಜಿಲ್ಲೆಯಾಗಿ ವಿಜಯನಗರ ಘೋಷಣೆ

31ನೇ ಜಿಲ್ಲೆಯಾಗಿ ವಿಜಯನಗರ ಘೋಷಣೆ

ಬೆಂಗಳೂರು: ವಿಜಯನಗರವನ್ನು ನೂತನ ಜಿಲ್ಲೆಯಾಗಿ ಘೋಷಿಸಲು ಗ್ರೀನ್ ಸಿಗ್ನಲ್ ಸಿಕ್ಕಿದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಿದ್ದು, ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯನಗರ ಜಿಲ್ಲೆ ಸ್ಥಾಪನೆಗೆ ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ ನೀಡಲಾಗಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಗಣಿ ಜಿಲ್ಲೆ ಬಳ್ಳಾರಿಯನ್ನು ವಿಭಜಿಸಿ ಹೊಸದಾಗಿ ವಿಜಯನಗರ ಜಿಲ್ಲೆ ಅಧಿಕೃತವಾಗಿ ಘೋಷಣೆ ಮಾಡಲಾಗುವುದು. ವಿಜಯನಗರ ಜಿಲ್ಲೆ ಸ್ಥಾಪನೆಗೆ ಸಂಪುಟ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ ನೀಡಲಾಗಿದೆ. ಮುಂದಿನ ಸಂಪುಟ ಸಭೆಯಲ್ಲಿ ವಿಜಯನಗರ ಜಿಲ್ಲೆ ಸ್ಥಾಪನೆಗೆ ಅಧಿಕೃತ ಅನುಮೋದನೆ ನೀಡಲಾಗುವುದು ಎಂದು ತಿಳಿಸಿದರು.

ವಿಜಯನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕೆಂಬ ಈ ಭಾಗದ ಬಹುದಿನಗಳ ಬೇಡಿಕೆಗೆ ಸರ್ಕಾರ ಕೊನೆಗೂ ಅಸ್ತು ಎಂದಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿದ್ಯುಕ್ತವಾಗಿ ಘೋಷಣೆಯಾಗಲಿದೆ.

ಇದೆ ವೇಳೆ ಮರಾಠ ಅಭಿವೃದ್ಧಿ ಪ್ರಾಧಿಕಾರದ ಬಗ್ಗೆ ಮಾತನಾಡಿದ್ದು, ಮರಾಠ ಅಭಿವೃದ್ಧಿ ಪ್ರಾಧಿಕಾರದ ಹೆಸರು ಬದಲಾವಣೆಗೆ ನಿರ್ಧರಿಸಿದ್ದು, ಇನ್ನು ಮುಂದೆ ಮರಾಠ ಸಮುದಾಯ ನಿಗಮ ಎಂದು ಬದಲಾವಣೆಯಾಗಲಿದೆ. ಮರಾಠ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಪ್ರಾಧಿಕಾರ ಮಾಡಬೇಕಾದರೆ ಕಾನೂನು ಮಾಡಬೇಕು. ಆದರೆ ನಿಗಮಕ್ಕೆ ಸರ್ಕಾರವೇ ನಿರ್ಧಾರ ಕೈಗೊಳ್ಳಬಹುದು. ಹಣ ಎಷ್ಟು ನಿಗದಿ ಮಾಡಬೇಕು ಎಂಬುದು ಇನ್ನೂ ಚರ್ಚೆಯಾಗಿಲ್ಲ. ಒಂದು ಸಮುದಾಯದ ಅಭಿವೃದ್ಧಿ ವಿಷಯದಲ್ಲಿ ಯಾಕೆ ವಿರೋಧ ಮಾಡುತ್ತಿದ್ದಾರೋ ಗೊತ್ತಿಲ್ಲ. ಆದರೂ ಅಭಿವೃದ್ಧಿಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದಿದ್ದಾರೆ.

ವಿಜಯನಗರ ಪ್ರತ್ಯೇಕ ಜಿಲ್ಲೆ ನಿರ್ಮಾಣಕ್ಕೆ ಬಹಳ ಪ್ರಯತ್ನ ಮಾಡಿದ್ದ ಆನಂದ್ ಸಿಂಗ್ ಅವರು ಇವತ್ತಿನ ಸಂಪುಟ ಸಭೆ ನಿರ್ಧಾರವನ್ನು ಸ್ವಾಗತಿಸಿದರು. ವಿಜಯನಗರ ಜಿಲ್ಲೆಯಾಗಬೇಕು ಎಂಬುದು ಬಹುದಿನದ ಬೇಡಿಕೆ. ಹಿಂದೂ ಸಾಮ್ರಾಜ್ಯವಾಗಿದ್ದ ವಿಜಯನಗರ ಕ್ಷೇತ್ರವನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಲು ಸಾಧ್ಯವಾಗುತ್ತದೆ. ಬಳ್ಳಾರಿ ಪಶ್ಚಿಮ ಭಾಗದ ತಾಲೂಕುಗಳ ಬೇಡಿಕೆ ಈಡೇರಿದೆ. ಈ ನಿಟ್ಟಿನಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡಿದ್ದೇವೆ ಎಂದು ಆನಂದ್ ಸಿಂಗ್ ತಿಳಿಸಿದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments