Wednesday, June 16, 2021
No menu items!
Home Bharata ದಿಢೀರ್ ಸ್ವಯಂ ನಿವೃತ್ತಿ ಹೊಂದಿದ್ದ ಮಾಜಿ ಹಣಕಾಸು ಕಾರ್ಯದರ್ಶಿ ಹೇಳಿದ ಸತ್ಯವೇನು ಗೊತ್ತಾ..?

ದಿಢೀರ್ ಸ್ವಯಂ ನಿವೃತ್ತಿ ಹೊಂದಿದ್ದ ಮಾಜಿ ಹಣಕಾಸು ಕಾರ್ಯದರ್ಶಿ ಹೇಳಿದ ಸತ್ಯವೇನು ಗೊತ್ತಾ..?

ಕೆಲಸ ತೊರೆದ ಒಂದೂವರೆ ವರ್ಷದ ಬಳಿಕ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತರಾಮನ್ ಬಗ್ಗೆ ಮಾಜಿ ಹಣಕಾಸು ಕಾರ್ಯದರ್ಶಿ ತಮ್ಮ ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಕೆಲಸ ಮಾಡುವುದು ತೀರಾ ಕಷ್ಟಕರವಾದ ವಿಷಯವಾಗಿತ್ತು. ವೈಯಕ್ತಿಕ ಸಂಘರ್ಷದ ಕಾರಣಕ್ಕೆ ನಾನು ಸ್ವಯಂ ನಿವೃತ್ತಿ ಪಡೆದುಕೊಂಡೆ ಎಂದು ಮಾಜಿ ಹಣಕಾಸು ಕಾರ್ಯದರ್ಶಿ ಸುಭಾಶ್ ಚಂದ್ರ ಗರ್ಗ್ ಹೇಳಿದ್ದಾರೆ.

ಸುಭಾಶ್ ಚಂದ್ರ ಗರ್ಗ್ ಕಳೆದ ವರ್ಷ ಜೂನ್ ತಿಂಗಳಿನಲ್ಲಿ ತಮ್ಮ ಹುದ್ದೆಯಿಂದ ಸ್ವಯಂ ನಿವೃತ್ತಿ ಹೊಂದಿದ್ದರು. ಆಗ ಯಾರಿಗೂ ಅವರು ಯಾಕೆ ನಿವೃತ್ತಿ ಪಡೆದರು ಎಂಬ ಬಗ್ಗೆ ಮಾಹಿತಿ ಇರಲಿಲ್ಲ. ಇದೀಗ ಅವರೇ ತಮ್ಮ ಸ್ವಯಂ ನಿವೃತ್ತಿ ಬಗ್ಗೆ ಅವರ ಬ್ಲಾಗ್ನಲ್ಲಿ ಬರೆದುಕೊಂಡಿದ್ದಾರೆ.

ಕಳೆದ ವರ್ಷ ಈ ದಿನದಂದು 36 ವರ್ಷಗಳಿಗೂ ಹೆಚ್ಚು ಕಾಲ ಸರ್ಕಾರಿ ಸಾರ್ವಜನಿಕ ಸೇವೆಯನ್ನು ಪೂರೈಸಿದ್ದು, ನಂತರ ಸ್ವಯಂಪ್ರೇರಿತ ನಿವೃತ್ತಿ ತೆಗೆದುಕೊಂಡು ಭಾರತೀಯ ಆಡಳಿತ ಸೇವೆಯನ್ನು ತೊರೆದಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಅಷ್ಟೇ ಅಲ್ಲ ಈ ಬ್ಲಾಗ್ನಲ್ಲಿ ದೇಶದ ಆರ್ಥಿಕತೆ ಬಗ್ಗೆಯೂ ಬರೆದಿದ್ದು, 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧಿಸುವ ಸಾಮರ್ಥ್ಯದ ಕುರಿತು ಭಾರತದಲ್ಲಿ ಸಾಕಷ್ಟು ಸಿನಿಕತನವಿದೆ. 1% ಜನರಿಗೆ ಕೂಡಾ ವೈರಸ್ ಇಲ್ಲದಿರುವ ಸಂದರ್ಭ ಇಡೀ ದೇಶದಲ್ಲಿ ವಿಶ್ವದ ಅತ್ಯಂತ ಕಠಿಣ ಲಾಕ್ ಡೌನ್ ಹೇರಲಾಗಿತ್ತು. ಈ ಮೂಲಕ ಆರ್ಥಿಕ ಬೆಳವಣಿಗೆಯ ಕಣ್ಣು ಗುಡ್ಡೆಯನ್ನು ಕಿತ್ತುಹಾಕಲಾಗಿದೆ ಎಂದು ಅವರು ಬರೆದಿದ್ದಾರೆ.

ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆಯು 23.9 ಶೇ.ರಷ್ಟು ಕುಗ್ಗಿತ್ತು. ಇದಕ್ಕೆ ಮುಖ್ಯ ಕಾರಣ ಮಾರ್ಚ್ 25 ರಂದು ಜಾರಿಗೆ ಬಂದ 68 ದಿನಗಳ ಕಠಿಣ ಲಾಕ್ಡೌನ್. ಇದರಿಂದಾಗಿ ಕಾರ್ಖಾನೆಗಳು ಹಾಗೂ ವ್ಯಾಪಾರ ಸಂಸ್ಥೆಗಳು ಸ್ಥಗಿತಗೊಂಡಿತು, ಸಾರ್ವಜನಿಕ ಸಾರಿಗೆ ಮುಚ್ಚಿತು ಮತ್ತು ಲಕ್ಷಾಂತರ ಕಾರ್ಮಿಕರ ವಲಸೆಗೂ ಕಾರಣವಾಯಿತು ಸುಭಾಶ್ ಚಂದ್ರ ಗರ್ಗ್ ಹೇಳಿದ್ದಾರೆ.

ಸುಭಾಶ್ ಚಂದ್ರ ಗರ್ಗ್ 1983 ರ ರಾಜಸ್ಥಾನ್ ಕೇಡರ್ನ ಐಎಎಸ್ ಅಧಿಕಾರಿಯಾಗಿದ್ದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments