Tuesday, June 15, 2021
No menu items!
Home Latest ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿಗೆ ಜಾಮೀನು

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿಗೆ ಜಾಮೀನು

ನವದೆಹಲಿ : ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್ ಟಿವಿ ಎಡಿಟರ್ ಅರ್ನಬ್ ಗೋಸ್ವಾಮಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಅರ್ನಬ್ ಸಲ್ಲಿಸಿರುವ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಇಂದಿರಾ ಬ್ಯಾನರ್ಜಿ ಅವರಿದ್ದ ರಜಾಕಾಲದ ನ್ಯಾಯಪೀಠ, ಅರ್ನಬ್ ಗೋಸ್ವಾಮಿ ಮತ್ತು ಇತರ ಇಬ್ಬರು ಆರೋಪಿಗಳಿಗೆ 50 ಸಾವಿರ ರೂಪಾಯಿ ಬಾಂಡ್ ನ ವಿರುದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿತು.

ಈ ಪ್ರಕರಣ ಹೈಕೋರ್ಟ್ ನಲ್ಲಿ ಬಾಕಿ ಇರುವುದರಿಂದ, ಈ ಪ್ರಕರಣದ ಕಾನೂನು ಅಂಶಗಳ ಬಗ್ಗೆ ಸುಪ್ರೀಂ ಕೋರ್ಟ್ ಯಾವುದೇ ಅಭಿಪ್ರಾಯ ವ್ಯಕ್ತಪಡಿಸುವುದಿಲ್ಲ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ.

ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಇಂದಿರಾ ಬ್ಯಾನರ್ಜಿ ಅವರಿದ್ದ ರಜಾಕಾಲದ ಪೀಠವು, ‘ವ್ಯಕ್ತಿಗಳನ್ನು ಸೈದ್ಧಾಂತಿಕ, ಭಿನ್ನಾಭಿಪ್ರಾಯದ ಆಧಾರದ ಮೇಲೆ ಗುರಿಮಾಡುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿ, ನಾಗರಿಕರ ಸ್ವಾತಂತ್ರ್ಯವನ್ನು ರಕ್ಷಿಸಲು ಸುಪ್ರೀಂ ಕೋರ್ಟ್ ಇದೆ ಎಂಬುದನ್ನು ಅರಿತುಕೊಳ್ಳಬೇಕು ಎಂದು ಹೇಳಿದೆ.

ಭಾರತೀಯ ಪ್ರಜಾಪ್ರಭುತ್ವವು ಅಸಾಧಾರಣವಾಗಿ ನಿಷ್ಕ್ರಿಯವಾಗಿದೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ ಮತ್ತು ಮಹಾರಾಷ್ಟ್ರ ಸರ್ಕಾರವು ಇದನ್ನೆಲ್ಲ (ಟಿವಿಯಲ್ಲಿ ಅರ್ನಬ್ ನ ನಿಂದನೆ) ಕಡೆಗಣಿಸಬೇಕು. ‘ಅವರ ಸಿದ್ಧಾಂತ ಏನೇ ಇರಲಿ, ಕನಿಷ್ಠ ನಾನು ಅವರ ಚಾನೆಲ್ ಅನ್ನು ಸಹ ನೋಡುವುದಿಲ್ಲ, ಆದರೆ ಈ ಪ್ರಕರಣದಲ್ಲಿ ಸಾಂವಿಧಾನಿಕ ನ್ಯಾಯಾಲಯ ಇಂದು ಹಸ್ತಕ್ಷೇಪ ಮಾಡದಿದ್ದರೆ, ನಾವು ವಿನಾಶದ ಹಾದಿಗೆ ಪ್ರಯಾಣಿಸುತ್ತಿದ್ದೇವೆ’ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು.

‘ಹೈಕೋರ್ಟ್ʼಗಳು ಜಾಮೀನು ನೀಡದಿರುವ ಮತ್ತು ಜನರ ವೈಯಕ್ತಿಕ ಸ್ವಾತಂತ್ರ್ಯವನ್ನು ರಕ್ಷಿಸುವಲ್ಲಿ ವಿಫಲವಾಗಿರುವ ಪ್ರಕರಣ ನಂತರ ನಾವು ನೋಡುತ್ತಿದ್ದೇವೆ’ ಎಂದು ಕೋರ್ಟ್ ಹೇಳಿದೆ.

‘ಅರ್ನಬ್ ಗೋಸ್ವಾಮಿ ಮತ್ತು ಇನ್ನಿಬ್ಬರು ತಮಗೆ 5.4 ಕೋಟಿ ರೂ. ಹಣ ನೀಡಬೇಕು. ಆ ಹಣ ನೀಡಲು ಅವರು ಒಪ್ಪುತ್ತಿಲ್ಲ. ಇದರಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ,’ ಎಂದು ಡೆತ್ ನೋಟ್ ಬರೆದಿಟ್ಟು ಅನ್ವಯ್ ನಾಯಕ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಮಗ ಸಾವನ್ನಪ್ಪಿರುವುದು ಗೊತ್ತಾಗುತ್ತಿದ್ದಂತೆ ಅನ್ವಯ್ ಅವರ ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣದ ವಿಚಾರವಾಗಿ ಕಳೆದ ವಾರ ಅರ್ನಬ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಮಧ್ಯಂತರ ಜಾಮೀನು ನೀಡಿ ಎಂದು ಅರ್ನಬ್ ಬಾಂಬೇ ಹೈಕೋರ್ಟ್ಗೆ ಮನವಿ ಮಾಡಿದ್ದರು. ಆದರೆ, ಈ ಮನವಿ ತಿರಸ್ಕರಿಸಿರುವ ನ್ಯಾಯಾಲಯ, ಕೆಳ ಹಂತದ ಕೋರ್ಟ್ಗೆ ತೆರಳಿ ಜಾಮೀನು ಕೋರಬಹುದು ಎಂದು ಹೇಳಿತ್ತು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments