ನವದೆಹಲಿ : ಉತ್ತರ ಪ್ರದೇಶದಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿದ ಅಧಿಕಾರಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇಂದು ಮಹತ್ವದ ಆದೇಶವೊಂದನ್ನ ನೀಡಿದೆ.ರಾಜ್ಯ ಸರ್ಕಾರಗಳ ಅನುಮತಿ ಇಲ್ಲದೇ CBI ಯಾವುದೇ ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ತಿಳಿಸಿದೆ.
ಸಿಬಿಐ ತನಿಖೆ ವಿಚಾರದಲ್ಲಿ ಕೇಂದ್ರ ನಿರ್ಧಾರ ತೆಗೆದುಕೊಳ್ಳುವಂತಿಲ್ಲ. ಆದರೆ ಸಿಬಿಐ ಯಾವುದೇ ರಾಜ್ಯದಲ್ಲಿ ತನಿಖೆ ನಡೆಸಬೇಕೆಂದರೆ ಆಯಾ ರಾಜ್ಯಗಳ ಸಮ್ಮತಿ ಪಡೆಯಲೇಬೇಕೆಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ಅಲಹಾಬಾದ್ನ ಫರ್ಟಿಕೋ ಮಾರ್ಕೆಟಿಂಗ್ ಕಂಪೆನಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿದ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನಿಂದ ಈ ಮಹತ್ವದ ತೀರ್ಪು ಹೊರಬಿದ್ದಿದೆ. ರಾಜ್ಯ ಸರ್ಕಾರದ ಅನುಮತಿ ಇಲ್ಲದೇ ಸಿಬಿಐ ರೇಡ್ ಮಾಡಿದ್ದನ್ನು ಇಲ್ಲಿ ಪ್ರಶ್ನಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸುಪ್ರೀಂ ಇಂದು ಈ ಮಹತ್ವದ ತೀರ್ಪು ನೀಡಿದೆ.
ಅಲ್ಲದೇ ಕೇಂದ್ರಾಡಳಿತ ಪ್ರದೇಶವನ್ನ ಮೀರಿ, ಕೇಂದ್ರ ಸರ್ಕಾರ ರಾಜ್ಯದ ಮೇಲೆ ಸಿಬಿಐ ಅಧಿಕಾರ ಹಾಗೂ ನ್ಯಾಯವ್ಯಾಪ್ತಿಯನ್ನು ವಿಸ್ತರಿಸಿದರೆ, ಅದಕ್ಕೆ ಆ ರಾಜ್ಯದ ಒಪ್ಪಿಗೆ ಇಲ್ಲದಿದ್ದರೆ ಆ ನಿರ್ಣಯವನ್ನು ಅನುಮತಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.