Tuesday, June 15, 2021
No menu items!
Home Bharata ಮೊದಲು ಬಿಜೆಪಿ ನಾಯಕರ ಮೇಲೆ ಲವ್ ಜಿಹಾದ್ ಕಾನೂನನ್ನು ಪ್ರಯೋಗಿಸಿ: ಉರ್ದು ಕವಿ ಮುನವ್ವರ್

ಮೊದಲು ಬಿಜೆಪಿ ನಾಯಕರ ಮೇಲೆ ಲವ್ ಜಿಹಾದ್ ಕಾನೂನನ್ನು ಪ್ರಯೋಗಿಸಿ: ಉರ್ದು ಕವಿ ಮುನವ್ವರ್

ಲಕ್ನೋ: ಇತ್ತೀಚೆಗೆ ಲವ್ ಜಿಹಾದ್ ಕಾನೂನು ರಾಜ್ಯದಲ್ಲೂ ಸದ್ದು ಮಾಡ್ತಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಖ್ಯಾತ ಉರ್ದು ಕವಿ ಮುನವ್ವರ್ ರಾಣಾ, ಈ ಲವ್ ಜಿಹಾದ್ ಕಾಯ್ದೆಯನ್ನು ಮೊದಲು ಬಿಜೆಪಿ ನಾಯಕರ ಕುಟುಂಬಗಳ ಮೇಲೆ ಪ್ರಯೋಗಿಸಿ ಎಂದು ಕಿಡಿಕಾರಿದ್ದಾರೆ.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಮುನವ್ವರ್ ಲವ್ ಜಿಹಾದ್ ಕಾನೂನನ್ನು ಜಾರಿಗೆ ತರಲು ಪ್ರಯತ್ನಿಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಬಿಜೆಪಿ ನಾಯಕರ ಎರಡು ಪ್ರಮುಖ ಕುಟುಂಬಗಳು ತಮ್ಮ ಧರ್ಮದಿಂದ ಹೊರಗೆ ಮುಸ್ಲಿಂ ಹುಡುಗಿಯರನ್ನು ಸೊಸೆಯಾಗಿ ಪಡೆದಿದ್ದಾರೆ. ಇದಲ್ಲದೆ, ಹಲವು ನಾಯಕರು ತಮ್ಮ ಧರ್ಮದಿಂದ ಹೊರಗೆ ಬೇರೆ ಧರ್ಮದಲ್ಲಿ ಸಂಬಂಧ ಹೊಂದಿದ್ದಾರೆ. ಲವ್ ಜಿಹಾದ್ ಕಾನೂನನ್ನು ಮೊದಲು ಈ ಕುಟುಂಬಗಳ ಮೇಲೆ ಪ್ರಯೋಗಿಸಬೇಕು. ಹೀಗೆ ಪ್ರಯೋಗಿಸಿದರೆ ಮಾತ್ರ ನಾವು ಈ ಕಾನೂನಿಗೆ ಬೆಂಬಲ ನೀಡುತ್ತೇವೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಮತ್ತೊಂದು ಟ್ವೀಟ್ನಲ್ಲಿ, “ಲವ್ ಜಿಹಾದ್ ಎಂಬುದು ಕೇವಲ ಸಮಾಜದಲ್ಲಿ ದ್ವೇಷವನ್ನು ಹರಡಲು ಬಳಸುವ ಜುಮ್ಲಾ ಆಗಿದ್ದು, ಮುಸ್ಲಿಂ ಹುಡುಗಿಯರು ಇದರಿಂದ ಹೆಚ್ಚು ಬಳಲುತ್ತಿದ್ದಾರೆ ಯಾಕೆಂದರೆ ಸಮುದಾಯದ ಯುವಕರು ಹೊರಗಿನ ಯುವತಿಯರನ್ನು ಮದುವೆಯಾಗುತ್ತಿದ್ದಾರೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.


ಉತ್ತರಪ್ರದೇಶದ ಸರ್ಕಾರ “ಲವ್ ಜಿಹಾದ್” ವಿರುದ್ಧ ಕಾನೂನನ್ನೇ ರೂಪಿಸಲು ಮುಂದಾಗಿದೆ. ಆದರೆ, ಉತ್ತರಪ್ರದೇಶದ ಅಲಹಾಬಾದ್ ಉಚ್ಚ ನ್ಯಾಯಾಲಯ ವಯಸ್ಸಿಗೆ ಬಂದ ಯಾವುದೇ ಇಬ್ಬರು ವ್ಯಕ್ತಿಗಳು ಒಟ್ಟಿಗೆ ಬಾಳಲು ಕಾನೂನಿನಲ್ಲಿ ಅವಕಾಶ ಇದೆ. ಅವರಿಬ್ಬರ ಶಾಂತಿಯುತ ಬದುಕಿಗೆ ಬೇರಾವುದೇ ವ್ಯಕ್ತಿ ಅಥವಾ ಕುಟುಂಬದಿಂದ ತೊಂದರೆ ಆಗಬಾರದು. ಸರ್ಕಾರ ಕೂಡ ಇಬ್ಬರು ವಯಸ್ಕರ ಸಂಬಂಧಕ್ಕೆ ಅಡ್ಡಗಾಲು ಹಾಕುವಂತಿಲ್ಲ” ಎಂದು ಮಹತ್ವದ ತೀರ್ಪು ನೀಡಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments