Tuesday, August 3, 2021
No menu items!
Home Bharata ಮಹಾರಾಷ್ಟ್ರದ ನೆರೆ ಪೀಡಿತ ಪ್ರದೇಶಗಳಿಗೆ ₹10000 ಕೋಟಿ ಪ್ಯಾಕೇಜ್ …!

ಮಹಾರಾಷ್ಟ್ರದ ನೆರೆ ಪೀಡಿತ ಪ್ರದೇಶಗಳಿಗೆ ₹10000 ಕೋಟಿ ಪ್ಯಾಕೇಜ್ …!

ಮಹಾರಾಷ್ಟ್ರ ; ಭಾರೀ ಅವಾಂತರವನ್ನೇ ಸೃಷ್ಟಿ ಮಾಡಿರುವ ವರುಣ ಜನಸಾಮಾನ್ಯರ ಹೊಟ್ಟೆಗೆ ಕೊಳ್ಳಿ ಇಟ್ಟಿದೆ. ಭಾರೀ ವರುಣಾಘಾತಕ್ಕೆ ನಲುಗಿರುವ ಮಹಾರಾಷ್ಟ್ರ ಸಾಮಾನ್ಯ ಸ್ಥಿತಿಗೆ ಮರಳಲು ಹೆಣಗುತ್ತಿದೆ. ಇದೀಗ ನೆರೆ ಪೀಡಿತ ಪ್ರದೇಶದ ಅಭಿವೃದ್ಧಿಗೆ ಅಲ್ಲಿನ ಸರ್ಕಾರ ₹10000 ಕೋಟಿ ಪರಿಹಾರ ನಿಧಿ ಘೋಷಿಸಿದೆ.

ಮಳೆ ಹಾನಿ ಪ್ರದೇಶಗಳಿಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ತಂಡ ಇತ್ತೀಚೆಗಷ್ಟೇ ಭೇಟಿ ನೀಡಿದ ಬೆನ್ನಲ್ಲೇ ಇದೀಗ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಪ್ಯಾಕೇಜ್ ಘೋಶಿಸಿದ್ದು, ದೀಪಾವಳಿ ಹಬ್ಬದ ಒಳಗಾಗಿ ಪರಿಹಾರ ಮೊತ್ತ ವಿತರಣೆಯಾಗಲಿದೆ ಎಂದು ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯ ಹೊಡೆತಕ್ಕೆ ಸಿಲುಕಿ ಸುಮಾರು 25 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.

ಮಹಾರಾಷ್ಟ್ರ ದ ಪಶ್ಚಿಮ ಹಾಗೂ ಮಧ್ಯ ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯ ಹೊಡೆತಕ್ಕೆ ರೈತರು ಬೆಳೆದಿರುವ ಬೆಳೆಗಳೆಲ್ಲಾ ನೀರುಪಾಲಾಗಿದ್ದವು. ಇನ್ನೇನು ಮಾಡುವುದು ಎಂದು ತಲೆ ಮೇಲೆ ಕೈ ಹೊತ್ತು ಕೂತಿದ್ದ ರೈತಾಪಿ ವರ್ಗಕ್ಕೆ ಮುಖ್ಯಮಂತ್ರಿ ಗಳು ₹10000 ಕೋಟಿ ಪ್ಯಾಕೇಜ್ ಘೋಶಿಸಿರುವುದು ಕೊಂಚ ನಿರಾಳತೆ ಮೂಡಿದೆ.

ಔರಂಗಾಬಾದ್ , ಸೊಲ್ಲಾಪುರ, ಸತರಾ , ಸಾಂಗ್ಲಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ರೈತರು ಭಾರೀ ಸಂಕಷ್ಟ ಅನುಭವಿಸಿದ್ದಾರೆ. ಅತೀಯಾದ ಮಳೆಯಿಂದಾಗಿ ರೈತರು ಬೆಳೆದಿರುವ ದಾಳಿಂಬೆ, ಸೋಯಾಬೀನ್ ಮತ್ತು ಕಬ್ಬಿನ ಬೆಳೆಗಳೆಲ್ಲಾ ನೀರುಪಾಲಾಗಿದ್ದು ರೈತರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಇದನ್ನೆಲ್ಲಾ ಅರಿತ ಸರ್ಕಾರ ಕೂಡಲೇ ಹಣ ಬಿಡುಗಡೆ ಮಾಡುವಂತೆ ಆದೇಶ ನೀಡಿದೆ. ಪರಿಹಾರಕ್ಕಾಗಿ ಕೇಂದ್ರ ಸರ್ಕಾರದ ಬಳಿಯೂ ಮನವಿ ಮಾಡಿಕೊಂಡಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments