Tuesday, August 3, 2021
No menu items!
Home Bharata ಆಶ್ರಮದಲ್ಲಿ ಚಹಾ ಸೇವಿಸಿ ಸಾಧುಗಳ ನಿಗೂಢ ಸಾವು..!

ಆಶ್ರಮದಲ್ಲಿ ಚಹಾ ಸೇವಿಸಿ ಸಾಧುಗಳ ನಿಗೂಢ ಸಾವು..!

ಮಥುರಾ: ಉತ್ತರಪ್ರದೇಶದ ಮಥುರಾದ ಆಶ್ರಮದಲ್ಲಿ ಚಹಾ ಸೇವಿಸಿದ ಮೂವರು ಸಾಧುಗಳಲ್ಲಿ ಇಬ್ಬರು ಮೃತಪಟ್ಟು ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಚಹಾದಲ್ಲಿ ವಿಷ ಹಾಕಿ ನೀಡಿರುವದೇ ಸಾವಿಗೆ ಕಾರಣ ಎನ್ನಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಆಶ್ರಮದಲ್ಲಿ ಟೀ ಸೇವಿಸಿದ ಗುಲಾಬ್ ಸಿಂಗ್ ಮತ್ತು ಶ್ಯಾಮ್ ಸುಂದರ್ ಎಂಬ ಇಬ್ಬರು ಸಾಧುಗಳು ಮೃತಪಟ್ಟವರು. ರಾಮ್ ಬಾಬು ಎಂಬ ಮತ್ತೊಬ್ಬ ಸಾಧುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 60 ವರ್ಷದ ಗುಲಾಬ್ ಸಿಂಗ್ ಚಹಾ ಕುಡಿದ ಸ್ಥಳದಲ್ಲೇ ಮೃತಪಟ್ಟರೆ, 61 ವರ್ಷದ ಶ್ಯಾಮ್ ಸುಂದರ್ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೂವರು ಸಾಧುಗಳು ಮಥುರಾದ ಆಶ್ರಮದಲ್ಲಿ ತಂಗಿದ್ದರು. ತಾವು ತಂಗಿದ್ದ ಜಾಗಕ್ಕೆ ಚಹಾ ತರಿಸಿಕೊಂಡು ಕುಡಿದಿದ್ದರು. ಚಹಾದಲ್ಲಿ ವಿಷ ಬೆರೆತಿತ್ತು ಎಂದು ಹೇಳಲಾಗುತ್ತಿದೆ. ಇನ್ನು ಘಟನೆ ಕುರಿತು ಹೇಳಿಕೆ ನೀಡಿರುವ ಮೃತ ಗೋಪಾಲ್ ಅವರ ಸಹೋದರ ಆಶ್ರಮದಲ್ಲಿ ಸಾಧುಗಳಿಗೆ ವಿಷ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಮತ್ತು ಈ ಕುರಿತು ನಿಸ್ಪಕ್ಷಪಾತ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

ಘಟನಾ ಸ್ಥಳಕ್ಕೆ ವಿಧಿ ವಿಜ್ಞಾನ ತಂಡ ಆಗಮಿಸಿದ್ದು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟ ಗುಲಾಬ್ ಸಿಂಗ್ ಕೋಸಿ ಕಲನ್ ಪೊಲೀಸ್ ಠಾಣೆ ವ್ಯಾಪ್ತಿಯ ದಲೌತಾ ಗ್ರಾಮದವರಾಗಿದ್ದು, ಶ್ಯಾಮ್ ಸುಂದರ್ ಮತ್ತು ರಾಮ್ ಬಾಬು ಅವರು ಗೋವರ್ಧನ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಂತಾ ಗ್ರಾಮದ ನಿವಾಸಿಗಳಾಗಿದ್ದಾರೆ.ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು ಮೃತ ವ್ಯಕ್ತಿಗಳ ಮರಣೋತ್ತರ ಪರೀಕ್ಷೆಯನ್ನು ವೈದ್ಯರ ತಂಡವು ನಡೆಸುತ್ತಿದೆ ಎಂದು ತಿಳಿಸಿದ್ದಾರೆ .

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments