Friday, September 24, 2021
No menu items!
Home Karnataka ಇನ್ನೂ 4 ದಿನ ಭಾರೀ ಮಳೆ; ಇಂದು ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್..!!

ಇನ್ನೂ 4 ದಿನ ಭಾರೀ ಮಳೆ; ಇಂದು ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್..!!

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಇದೇ ಪರಿಸ್ಥಿತಿ ಇನ್ನೂ ನಾಲ್ಕು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಂಡಮಾನ್ ಭಾಗದಲ್ಲಿ ವಾಯುಭಾರ ಕುಸಿತ ಹೆಚ್ಚಾಗಿದ್ದು  ಇದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ. ಹೀಗಾಗಿ ಮುಂದಿನ ನಾಲ್ಕು  ದಿನ ಕರ್ನಾಟಕದ ಬಹುತೇಕ ಕಡೆ ಮಳೆಯ ಅಬ್ಬರ ಇರಲಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ಇದ್ದರೆ, ಅ. 12ರಿಂದ 2 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದಲ್ಲಿ  ಇಂದು ಯೆಲ್ಲೋ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ಹಾಸನದಲ್ಲಿ ಮುಂದಿನ 24 ಗಂಟೆ ವ್ಯಾಪಕ ಮಳೆಯಾಗಲಿದ್ದು, ಅಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೊಡಗು, ಕೋಲಾರ, ರಾಮನಗರ ಮತ್ತು ತುಮಕೂರಿನಲ್ಲಿ ಅ. 11ಕ್ಕೆ ಅನ್ವಯವಾಗುವಂತೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು  ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.
Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments