Tuesday, October 26, 2021
No menu items!
Home Bharata ರಾಜ್ಯದಲ್ಲಿ 8,79,560ಕ್ಕೇರಿದ ಕೊರೋನಾ ಪ್ರಕರಣ;11,726ಮಂದಿ ಇದುವರೆಗೆ ಬಲಿ

ರಾಜ್ಯದಲ್ಲಿ 8,79,560ಕ್ಕೇರಿದ ಕೊರೋನಾ ಪ್ರಕರಣ;11,726ಮಂದಿ ಇದುವರೆಗೆ ಬಲಿ

ಬೆಂಗಳೂರು: ಕರ್ನಾಟಕ ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆ ಹೆಲ್ತ್‌ ಬುಲೆಟಿನ್ ಬಿಡುಗಡೆ ಮಾಡಿದ್ದು ರಾಜ್ಯದಲ್ಲಿ ಇಂದು 1505 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿದ್ದು 12 ಜನರು ಸಾವನ್ನಪ್ಪಿದ್ದಾರೆ.

ಇದುವರೆಗೂ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಪ್ರಕರಣಗಳ ಸಂಖ್ಯೆ 8,79,560ಕ್ಕೆ ಏರಿಕೆಯಾಗಿದೆ.ಕೊರೋನಾದಿಂದಾಗಿ ಇದುವರೆಗೂ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 11,726 ಕ್ಕೆ ಏರಿಕೆಯಾಗಿದೆ. ಕೊರೋನಾ ಸೋಂಕಿನಿಂದ 1067 ಜನರು. ಗುಣಮುಖಗೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ

ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ರಾಜ್ಯದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 25,316. ಇವುಗಳಲ್ಲಿ 18,830 ಸಕ್ರಿಯ ಪ್ರಕರಣಗಳು ಬೆಂಗಳೂರು ನಗರದಲ್ಲಿಯೇ ಇದ್ದು ಒಟ್ಟಾರೆ ಗುಣಮುಖಗೊಂಡವರ ಸಂಖ್ಯೆ 8,42,499. ಇನ್ನುಳಿದಂತೆ 409 ಜನರ ಸ್ಥಿತಿ ಚಿಂತಾಜನಕವಾಗಿದ್ದು ರಾಜ್ಯದ ವಿವಿಧ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಇದುವರೆಗೂ 17,990 ಆಂಟಿಜೆನ್, 102408 ಆರ್‌ಟಿಪಿಸಿಆರ್ ಪರೀಕ್ಷೆಗಳನ್ನು ಮಾಡಲಾಗಿದ್ದು ಒಟ್ಟು 120398 ಮಾದರಿಗಳ ಪರೀಕ್ಷೆಯನ್ನು ಮಾಡಲಾಗಿದೆ . ಇದುವರೆಗೂ 10690557 ಮಾದರಿಗಳ ಪರೀಕ್ಷೆ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments