Tuesday, October 26, 2021
No menu items!
Home Karnataka ಹಿಂದೆಂದು ಕಾಣದ ರೀತಿ ಡಿ.5ರಂದು ಬಂದ್, ತಾಕತ್ತಿದ್ದರೆ ತಡೆಯಲಿ : ವಾಟಾಳ್

ಹಿಂದೆಂದು ಕಾಣದ ರೀತಿ ಡಿ.5ರಂದು ಬಂದ್, ತಾಕತ್ತಿದ್ದರೆ ತಡೆಯಲಿ : ವಾಟಾಳ್

ಬೆಂಗಳೂರು: ರಾಜ್ಯ ಸರ್ಕಾರ ಮರಾಠಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲು ಹೊರಟಿರುವುದನ್ನು ಹಲವು ಕನ್ನಡಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಮಾಡಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆ ಇಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನೂರಾರು ಜನ ಕನ್ನಡಪರ ಹೋರಾಟಗಾರರು ಕೆಆರ್ಪುರ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಬೃಹತ್ ಪ್ರತಿಭಟನೆ ನಡೆಸಿದರು.

ಹೆದ್ದಾರಿ ತಡೆದ ಕಾರಣ ಇದರಿಂದಾಗಿ ಕೆಲ ಕಾಲ ಹೆದ್ದಾರಿಯ ಎರಡು ಕಡೆ ಟ್ರಾಫಿಕ್ ಜಾಮ್ ಉಂಟಾಯಿತು. ಪ್ರತಿಭಟನಾ ಕಾವು ಹೆಚ್ಚಾದ ಹಿನ್ನೆಲೆ ಪೋಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ದರು. ಬಂಧನಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ ಕನ್ನಡ ನೆಲದಲ್ಲಿ ಕನ್ನಡಿಗರಿಗೆ ದ್ರೋಹ ಮಾಡಿದ್ದಾರೆ. ನಮ್ಮ ಕನ್ನಡಿಗರ ತಾಳ್ಮೆಯನ್ನು ಸಿಎಂ ಯಡಿಯೂರಪ್ಪನವರು ಪರೀಕ್ಷೆ ಮಾಡುತ್ತಿದ್ದು, ಡಿಸೆಂಬರ್ 5 ನೇ ತಾರೀಖಿನಂದು ಇದುವರೆಗೂ ರಾಜ್ಯದಲ್ಲಿ ಎಂದು ನಡೆಯದ ರೀತಿಯಲ್ಲಿ ಕರ್ನಾಟಕ ಬಂದ್ ನಡೆಯುತ್ತದೆ. ಸಿಎಂ ಯಡಿಯೂರಪ್ಪ ತಾಕತ್ತಿದ್ದರೆ ತಡೆಯಲಿ. ಮುಖ್ಯಮಂತ್ರಿ ಯಡಿಯೂರಪ್ಪ ಕನ್ನಡವನ್ನು ಹಾಳು ಮಾಡುವ ಏಕೈಕ ಮುಖ್ಯಮಂತ್ರಿಯಾಗಿ ಕರ್ನಾಟಕ ಜನರಿಗೆ ಮೋಸ ಮಾಡುತ್ತಿದ್ದು, ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲು ಮುಂದಾಗಿದ್ದಾರೆ.

ಯಡಿಯೂರಪ್ಪನವರು ಇದೇ ರೀತಿ ಮುಂದುವರೆದ್ರೆ ನಿಪ್ಪಾಣಿ, ಕಾರವಾರ, ಬೆಳಗಾವಿ ಮಹಾರಾಷ್ಟ್ರ ಪಾಲಾಗುತ್ತೆ. ಇವರು ಬಸವಕಲ್ಯಾಣದಲ್ಲಿ ಚುನಾವಣೆ ಗೆಲ್ಲಲು ಯಡಿಯೂರಪ್ಪ ಆಡುತ್ತಿರುವ ದೊಡ್ಡ ನಾಟಕವಿದು. ಯಡಿಯೂರಪ್ಪ ಬರಿ ಬೋಗಸ್ ಸ್ಟೇಟ್ಮೆಂಟ್ ಕೊಡುತ್ತಾರೆ ಮಂತ್ರಿ ಮಂಡಳ, ಶಾಸನ ಸಭೆಯನ್ನು ಕೇಳದೆ ಪ್ರಾಧಿಕಾರ ರಚನೆ ಮಾಡಿ ಸರ್ವಾಧಿಕಾರಿ ಧೋರಣೆ ತೋರಿದ್ದಾರೆ. ಈಗಾಗಲೇ ಬಳ್ಳಾರಿಯನ್ನು ಎರಡು ಭಾಗ ಮಾಡಿದ್ದಾರೆ ಇದನ್ನು ನೋಡಿಕೊಂಡು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸುಮ್ಮನೆ ಇರಬಾರದು. ಹೊರಗೆ ಬಂದು ಹೋರಾಟ ಮಾಡಬೇಕಿದೆ ಎಂದು ಆಗ್ರಹಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments