Wednesday, October 27, 2021
No menu items!
Home Bharata ನ. 25ರಿಂದ ಅಪ್ಪಳಿಸಲಿದೆ 'ನಿವಾರ್' ಚಂಡಮಾರುತ : ಹಲವೆಡೆ ಭಾರೀ ಮಳೆ ಸಾಧ್ಯತೆ

ನ. 25ರಿಂದ ಅಪ್ಪಳಿಸಲಿದೆ ‘ನಿವಾರ್’ ಚಂಡಮಾರುತ : ಹಲವೆಡೆ ಭಾರೀ ಮಳೆ ಸಾಧ್ಯತೆ

ತಮಿಳುನಾಡು: ದಕ್ಷಿಣ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ನವದೆಹಲಿ,ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಹಲವೆಡೆ ನವೆಂಬರ್ 25ರಂದು ಭಾರೀ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಈ ಚಂಡಮಾರುತಕ್ಕೆ ‘ನಿವಾರ್’ ಎಂದು ಹೆಸರಿಡಲಾಗಿದ್ದು, ನೈರುತ್ಯ ಮತ್ತು ಆಗ್ನೇಯ ದಿಕ್ಕಿನ ಕಡಿಮೆ ಒತ್ತಡದ ಪ್ರದೇಶದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಎಚ್ಚರಿಸಿದೆ.

ನಿವಾರ್ ಚಂಡಮಾರುತವು ಹೆಚ್ಚಾಗಿ ತಮಿಳುನಾಡಿನ ಉತ್ತರ ಕರಾವಳಿಗೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಹವಾಮಾನ ತಜ್ಞರ ಪ್ರಕಾರ, ಈ ನಿವಾರ್ ಚಂಡಮಾರುತವು ಮುಂದಿನ 48 ಗಂಟೆಗಳ ಕಾಲ ತಮಿಳುನಾಡಿನ ಕಾರೈಕಲ್ ಮತ್ತು ಮಹಾಬಲಿಪುರಂ ಪ್ರದೇಶಗಳ ನಡುವೆ ದಾಟಿ ಹೋಗುತ್ತದೆ ಎಂದು ಹೇಳಲಾಗಿದೆ.

ನಿವಾರ್ ಚಂಡಮಾರುತ ಸಂದರ್ಭದಲ್ಲಿ ಗಾಳಿಯು ಗಂಟೆಗೆ ಸುಮಾರು 100 ಕಿ.ಮೀ ವೇಗದಲ್ಲಿ ಚಲಿಸುವುದರಿಂದ ನವೆಂಬರ್ 24 ರಿಂದ 26ರ ವರೆಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್ ನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ನವೆಂಬರ್ 25 ಮತ್ತು 26ರಂದು ದಕ್ಷಿಣ ಕರಾವಳಿ ಆಂಧ್ರ ಪ್ರದೇಶ, ರಾಯಲ್ ಸೀಮಾ ಮತ್ತು ತೆಲಂಗಾಣದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ಬುಲೆಟಿನ್ ನಲ್ಲಿ ಮಾಹಿತಿ ನೀಡಿದೆ.

ನಿವಾರ್ ಚಂಡಮಾರುತದ ಪರಿಣಾಮ ಕರ್ನಾಟಕ ರಾಜ್ಯದ ಮೇಲೂ ಬೀಳಲಿದ್ದು ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ನ.24 ಮತ್ತು 25ರಂದು ಸಾಧಾರಣ ಮಳೆಯಾದರೆ ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರಿನಲ್ಲಿ ನ.26, 27ರಂದು ಭಾರಿ ಮಳೆಯಾಗಲಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments