Monday, September 27, 2021
No menu items!
Home Karnataka ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಭರ್ಜರಿ ಗಿಫ್ಟ್ ಕೊಟ್ಟ ರಾಜ್ಯ ಸರ್ಕಾರ

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಭರ್ಜರಿ ಗಿಫ್ಟ್ ಕೊಟ್ಟ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ ವೀರಶೈವ, ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ಅನುದಾನ ನೀಡಿದೆ. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮಾಜದ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವರಲ್ಲಿ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರಿದ್ದಾರೆ. ಈ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಕಟ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮವನ್ನ ಸ್ಥಾಪಿಸಲಾಗಿದೆ. ಅದರಂತೆ ಈ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂಪಾಯಿ ಹಣವನ್ನ ಒದಗಿಸಲಾಗುವುದು ಅಂತಾ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮವನ್ನು ಕಂಪನಿ ಕಾಯ್ದೆ 2013ರ ಸೆಕ್ಷನ್ 7 ಅನ್ವಯ ನೊಂದಾಯಿಸಿ ಸ್ಥಾಪಿಸಲು ಆದೇಶಿಸಲಾಗಿದೆ. ಸರ್ಕಾರದ ಅನುಮೋದನೆ ಪಡೆದು ಕಾರ್ಪುರೇಟ್ ಅಫೇರ್ಸ್ ನಲ್ಲಿ ನೋಂದಾಯಿಸಿ ಕಾರ್ಯನಿರ್ವಹಿಸಲು ವ್ಯವಸ್ಥಾಪಕ ನಿರ್ದೇಶಕ ಹುದ್ದೆ ಸೃಜನೆ ಮಾಡಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೂಚನೆ ನೀಡಲಾಗಿದೆ.

ನಿಗಮ ಸ್ಥಾಪನೆಗೆ ಪ್ರಾರಂಭಿಕ ವೆಚ್ಚವನ್ನು ಆಯುಕ್ತರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅವರು ಭರಿಸಿ ನಂತರ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದಿಂದ ಮರು ಭರಣ ಮಾಡಲು ಸರ್ಕಾರ ಆದೇಶ ಹೊರಡಿಸಿದೆ.

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಬೆನ್ನಲ್ಲೇ ವೀರಶೈವ ಲಿಂಗಾಯತ ಸಮುದಾಯದ ನಾಯಕರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಒತ್ತಡ ಹೇರಿದ್ದರು. ಈ ಒತ್ತಡಕ್ಕೆ ಮಣಿದ ಯಡಿಯೂರಪ್ಪನವರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ವಾರದ ಹಿಂದೆ ಆದೇಶ ನೀಡಿದ್ದರು.

ಕರ್ನಾಟಕ ಸರ್ಕಾರ ಮರಾಠ ಮತ್ತು ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲು ಒಪ್ಪಿಗೆ ಕೊಟ್ಟಿರುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಒಕ್ಕಲಿಗ, ಕ್ರೈಸ್ತ, ಆರ್ಯ-ಈಡಿಗ, ಕುರುಬ ಸಮುದಾಯದವರು ಸಹ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವಂತೆ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments