Wednesday, June 16, 2021
No menu items!
Home Karnataka ಶಾಲಾ ಕಾಲೇಜು ಆರಂಭದ ಬಗ್ಗೆ ಶೀಘ್ರವೇ ಮಾಹಿತಿ: ಡಿಸಿಎಂ ಅಶ್ವಥ್‌ ನಾರಾಯಣ

ಶಾಲಾ ಕಾಲೇಜು ಆರಂಭದ ಬಗ್ಗೆ ಶೀಘ್ರವೇ ಮಾಹಿತಿ: ಡಿಸಿಎಂ ಅಶ್ವಥ್‌ ನಾರಾಯಣ

ಬೆಂಗಳೂರು: ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ. ಈ ಮಧ್ಯೆ ಶಾಲಾ_ಕಾಲೇಜು ಆರಂಭಿಸಿದ್ರೆ ಮಕ್ಕಳ ಸ್ಥಿತಿ ಏನು ಅನ್ನೋದು ಪೋಷಕರ ಆತಂಕ. ಇದರ ನಡುವೆಯೇ ಶಾಲೆ ಓಪನ್ ಅನ್ನೋ ಊಹಾಪೋಹಾ. ಇದರ ಬಗ್ಗೆ ಸ್ಪಷ್ಟ ಮಾಹಿತಿಯನ್ನು ಶೀಘ್ರವೇ ಕೊಡುವುದಾಗಿ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕಾಲೇಜುಗಳ ಆರಂಭಕ್ಕೆ ಸಂಬಂಧಿಸಿ ಯುಜಿಸಿ ಈಗಾಗಲೇ ಮಾರ್ಗಸೂಚಿಯನ್ನು ನೀಡಿದೆ. ಅದರಂತೆ ಸರಕಾರ ಎಲ್ಲ ಸಿದ್ಧತೆಗಳನ್ನೂ ಮಾಡಿಕೊಳ್ಳುತ್ತಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್.‌ ಸುರೇಶ್‌ ಕುಮಾರ್‌ ಅವರ ಜತೆಗೂ ಚರ್ಚೆ ನಡೆಸಿದ ನಂತರ ಸ್ಪಷ್ಟ ಮಾಹಿತಿ ನೀಡಲಾಗುವುದು ಎಂದರು.

ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಯಾವುದೇ ಸಮಸ್ಯೆ ಆಗದಂತೆ ಎಲ್ಲ ಮುನ್ನೆಚ್ಚರಿಕೆಗಳನ್ನು ಕೈಗೊಂಡು ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಲಾಗಿದೆ. ಅದರ ಮುಂದುವರೆದ ಭಾಗವಾಗಿ ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ಎಂದಿನಿಂದ ಹಾಜರಾಗಬೇಕು ಎಂಬ ಬಗ್ಗೆ ಸಂಬಂಧಿತರ ಜತೆ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಕೋವಿಡ್‌ ಮಾರ್ಗಸೂಚಿಯ ಪ್ರಕಾರ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ಅವೆಲ್ಲವುಗಳ ಸಾಧಕ- ಬಾಧಕಗಳನ್ನು ನೋಡಿಕೊಂಡೇ ತರಗತಿಗಳನ್ನು ಆರಂಭ ಮಾಡಲಾಗುವುದು ಎಂದು ಅವರು ತಿಳಿಸಿದರು

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments