Saturday, July 24, 2021
No menu items!
Home Bharata ವಿಶ್ವದ ಅತಿ ಉದ್ದದ 'ಅಟಲ್ ಸುರಂಗ ಮಾರ್ಗ' ಪೂರ್ಣ

ವಿಶ್ವದ ಅತಿ ಉದ್ದದ ‘ಅಟಲ್ ಸುರಂಗ ಮಾರ್ಗ’ ಪೂರ್ಣ

ಲೇಹ್: ಮನಾಲಿ – ಲೇಹ್ ಸಂಪರ್ಕ ಕಲ್ಪಿಸುವ ವಿಶ್ವದ ಅತಿ ಉದ್ದದ ಅಟಲ್ ಸುರಂಗ ಮಾರ್ಗ ಕಾಮಗಾರಿ ಪೂರ್ಣಗೊಂಡಿದೆ. 9.2 ಕಿಮೀ ಉದ್ದದ ಸುರಂಗ ಮಾರ್ಗ ಇದಾಗಿದ್ದು 10 ವರ್ಷಗಳಲ್ಲಿ ಇದರ ಕಾಮಗಾರಿ ಪೂರ್ಣಗೊಂಡಿದೆ. ಆರಂಭಿಕ ಹಂತದಲ್ಲಿ 6 ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸುವ ನಿರೀಕ್ಷೆಯಿತ್ತು.

ಮನಾಲಿ ಮತ್ತು ಲೇಹ್ ಸಂಪರ್ಕ ಕಲ್ಪಿಸುವ ಅಟಲ್ ಸುರಂಗ ಮಾರ್ಗ ಕಾಮಗಾರಿ ಪೂರ್ಣಗೊಂಡಿದೆ ಎಂದು ಮುಖ್ಯ ಇಂಜಿನಿಯರ್ ಕೆ.ಪಿ.ಪುರುಷೋತ್ತಮನ್ ಹೇಳಿದ್ದಾರೆ.

ಪ್ರತಿ 60 ಮೀಟರ್ ಗೆ ಒಂದು ಸಿಸಿಟಿವಿ ಕ್ಯಾಮರಾ ಅಳವಡಿಸಿದ್ದು, ಪ್ರತಿ 500 ಮೀಟರ್ ಗೆ ಒಂದು ತುರ್ತುನಿರ್ಗಮನ ವ್ಯವಸ್ಥೆಯನ್ನೂ ಸುರಂಗ ಮಾರ್ಗದಲ್ಲಿ ಮಾಡಿದ್ದೇವೆ. ಈ ಸುರಂಗ ಮಾರ್ಗದ ಮೂಲಕ ಸಂಚಾರ ಆರಂಭವಾದರೆ ಮನಾಲಿ ಮತ್ತು ಲೇಹ್ ನಡುವಿನ ಸಂಚಾರ 46 ಕಿಮೀ ಕಡಿಮೆಯಾಗಲಿದೆ. ಜೊತೆಗೆ ನಾಲ್ಕೂವರೆ ತಾಸು ಪ್ರಯಾಣಿಕರಿಗೆ ಉಳಿತಾಯವಾಗಲಿದೆ ಎಂದು ಅವರು ಹೇಳಿದರು.

ಅಗ್ನಿ ಅವಘಡ ತಡೆಗಟ್ಟಲು ಸುರಂಗ ಮಾರ್ಗದಲ್ಲಿ ಅಗ್ನಿಶಾಮಕ ವ್ಯವಸ್ಥೆಯನ್ನೂ ಮಾಡಲಾಗಿದೆ. ಈ ಕಾಮಗಾರಿ ವೇಳೆ ನಾವು ಹಲವಾರು ಅಡ್ಡಿಗಳನ್ನು ಎದುರಿಸಬೇಕಾಯಿತು. ಆದರೆ ಎಲ್ಲರೂ ಜೊತೆ ಸೇರಿ ಕೆಲಸ ಮಾಡಿದ್ದರಿಂದ ಕಾಮಗಾರಿ ಪೂರ್ಣಗೊಂಡಿದೆ. ಈ ಸುರಂಗ ಮಾರ್ಗ 10.5 ಮೀಟರ್ ಅಗಲವಿದ್ದು, ರಸ್ತೆಯ ಎರಡೂ ಕಡೆ 1 ಮೀಟರ್ ಪಾದಚಾರಿ ಮಾರ್ಗ ನಿರ್ಮಿಸಲಾಗಿದೆ.

News In Brief: World’s longest highway tunnel ready: Atal Tunnel will reduce the distance between Manali & Leh by 46 kilometres and save crores of rupees in transport costs.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments