Thursday, September 23, 2021
No menu items!
Home Karnataka ಯಕ್ಷಗಾನ ಕಲಾವಿದ ,ಮದ್ದಳೆ ಮಾಂತ್ರಿಕ ಹಿರಿಯಡ್ಕ ಗೋಪಾಲ್ ರಾವ್ ಇನ್ನು ನೆನಪು ಮಾತ್ರ…

ಯಕ್ಷಗಾನ ಕಲಾವಿದ ,ಮದ್ದಳೆ ಮಾಂತ್ರಿಕ ಹಿರಿಯಡ್ಕ ಗೋಪಾಲ್ ರಾವ್ ಇನ್ನು ನೆನಪು ಮಾತ್ರ…

ಉಡುಪಿ; ಶತಾಯುಷಿ ,ಹಿರಿಯ ಯಕ್ಷಗಾನ ಕಲಾವಿದ, ಮದ್ದಳೆ ಮಾಂತ್ರಿಕ ಹಿರಿಯಡ್ಕ ಗೋಪಾಲ್ ರಾವ್ (101) ಶನಿವಾರ ರಾತ್ರಿ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಹಿರಿಯಡ್ಕ ಮೇಳದಲ್ಲಿ ಮದ್ದಳೆ ವಾದಕರಾಗಿ ವೃತ್ತಿ ಜೀವನ ಪ್ರಾರಂಭಿಸಿದ ಇವರು, ಯಕ್ಷಗಾನದ ಬಡಗುತಿಟ್ಟಿನಲ್ಲಿ ಏರು ಮದ್ದಾಳೆ ಬಾರಿಸುವಲ್ಲಿ ನಿಸ್ಸೀಮರಾಗಿದ್ದರು. ಪೆರ್ಡೂರು ಹಾಗೂ ಮಂದಾರ್ತಿ ಯಕ್ಷಗಾನ ತಂಡದಲ್ಲೂ ಇವರು ಗುರುತಿಸಿಕೊಂಡಿದ್ದರು.

ಯಕ್ಷಗಾನದಲ್ಲಿ ಸಂಶೋಧನಾ ಪ್ರಬಂದ ಮಂಡಿಸಿದ ಮೊದಲ ವಿದೇಶಿ ಮಹಿಳೆ ಎನಿಸಿಕೊಂಡ ಮಾರ್ತಾ ಅಸ್ಟಿನ್ ಅವರಿಗೆ ಗೋಪಾಲ್ ರಾವ್ ಅವರೇ ಯಕ್ಷಗಾನ ಗುರುಗಳಾಗಿದ್ದರು. ಶ್ರೀಯುತರು ಶಿವರಾಂ ಕಾರಂತರ ಜೊತೆಯಲ್ಲೂ ನಿಕಟ ಸಂಬಂದ ಹೊಂದಿದ್ದರು.

ಹಿರಿಯಡ್ಕ ಗೋಪಾಲ್ ರಾವ್ ಅವರು ಡಿ.15 ,1919ರಂದು ಉಡುಪಿ ಜಿಲ್ಲೆಯ ಹಿರಿಯಡ್ಕ ದಲ್ಲಿ ಜನಿಸಿದ ಇವರು 101 ವರ್ಷಗಳ ತುಂಬು ಜೀವನ ನಡೆಸಿದ್ದರು. ಶ್ರೀಯುತರಿಗೆ 2018 ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ , ಜಾನಪದ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಅರಸಿ ಬಂದಿವೆ.

ಮೃತರ ಅಂತ್ಯಕ್ರಿಯೆ ಇಂದು ಅವರ ಸ್ವ ಗೃಹ ಒಂತಿಬೆಟ್ಟುವಿನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಪುತ್ರ ಸೇರಿದಂತೆ ಅಸಂಖ್ಯ ಯಕ್ಷ ಅಭಿಮಾನಿಗಳನ್ನು ಅಗಲಿದ್ದಾರೆ .

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments