Tuesday, June 15, 2021
No menu items!
Home Karnataka ಮುನಿರತ್ನ ಮಂತ್ರಿಯಾಗುವುದು ಫಿಕ್ಸ್ : ಸಿಎಂ ಯಡಿಯೂರಪ್ಪ

ಮುನಿರತ್ನ ಮಂತ್ರಿಯಾಗುವುದು ಫಿಕ್ಸ್ : ಸಿಎಂ ಯಡಿಯೂರಪ್ಪ

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಬಗ್ಗೆ ಇಂದು ಸಿಎಂ ಮಾತನಾಡಿದ್ದಾರೆ. ಸಂಪುಟದಲ್ಲಿ ಮುನಿರತ್ನ ಅವರಿಗೆ ಸ್ಥಾನ ಸಿಗುವುದು ಗ್ಯಾರಂಟಿ ಎಂದಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ವರ್ಚುವಲ್ ರ್ಯಾಲಿ ಉದ್ಘಾಟಿಸಿ ಮಾತನಾಡಿರುವ ಅವರು, ಚುನಾವಣೆ ಯಾವುದೇ ಇರಲಿ ಬಿಜೆಪಿಗೆ ಹಿನ್ನಡೆಯಾಗಬಾರದು. ಗೆಲುವೊಂದೆ ಗುರಿಯಾಗಿರಬೇಕು. 2 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದಿಂದ ಸರ್ಕಾರದ ಮೇಲೆ ಯಾವ ಪರಿಣಾಮ ಆಗುವುದಿಲ್ಲ. ಆದ್ರೆ ಪಕ್ಷಕ್ಕೆ ಹಿನ್ನಡೆಯಾಗದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.

ಮುನಿರತ್ನ ಬಗ್ಗೆ ಮಾತನಾಡಿರುವ ಸಿಎಂ, ಮುನಿರತ್ನ ಈಗಾಗಲೇ ಗೆದ್ದಾಗಿದೆ. ಅಂತರ ಎಷ್ಟು ಎಂಬುದಷ್ಟೇ ಗೊತ್ತಾಗಬೇಕಿದೆ. 40 ಸಾವಿರ ಅಂತದರಿಂದ ಮುನಿರತ್ನ ಗೆಲ್ಲುತ್ತಾರೆ ಎಂಬ ನಂಬಿಕೆ ಇದೆ ಎಂದಿದ್ದಾರೆ. ಸಂಪುಟ ವಿಸ್ತರಣೆಯಲ್ಲಿ ಮುನಿರತ್ನಗೆ ಮಂತ್ರಿ ಸ್ಥಾನ ಸಿಗುವುದು ಗ್ಯಾರಂಟಿ ಎಂದಿದ್ದಾರೆ.

ಇಷ್ಟೊತ್ತಿಗೆ ಸಂಪುಟ ವಿಸ್ತರಣೆ ಮಾಡಬೇಕಿತ್ತು. ಆದರೆ ಕೆಲವು ಕಾರಣಗಳಿಂದ ಅದು ಸಾಧ್ಯವಾಗಿರಲಿಲ್ಲ. ಇದೀಗ ಉಪ ಚುನಾವಣೆ ಮುಗಿದ ಕೂಡಲೇ ದಿಲ್ಲಿಗೆ ಹೋಗುತ್ತೇನೆ. ಸದ್ಯದಲ್ಲೇ ಸಂಪುಟ ವಿಸ್ತರಣೆ ಆಗುತ್ತದೆ ಎಂದು ಹೇಳಿದ್ದಾರೆ.

ಬೆಂಗಳೂರಿನ ಆರ್ ಆರ್ ನಗರ ಹಾಗೂ ತುಮಕೂರಿನ ಶಿರಾ ಕ್ಷೇತ್ರದ ಉಪಚುನಾವಣೆ ನವೆಂಬರ್ 3 ರಂದು ನಡೆಯುತ್ತಿದೆ. ಅಭ್ಯರ್ಥಿಗಳ ಪರ ಬಹಿರಂಗ ಪ್ರಚಾರ ನಾಳೆ ಸಂಜೆಗೆ ಮುಗಿಯಲಿದೆ. ನವೆಂಬರ್ 9 ರಂದು ಫಲಿತಾಂಶ ಹೊರಬೀಳಲಿದ್ದು, ಅಭ್ಯರ್ಥಿಗಳ ಭವಿಷ್ಯ ಗೊತ್ತಾಗಲಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments