Saturday, June 19, 2021
No menu items!
Home Karnataka ಗ್ಯಾಂಗ್ ರೇಪ್ ಪ್ರಕರಣ: ದಿನೇಶ್ ಗುಂಡುರಾವ್ ಫುಲ್‌ ಗರಂ!!

ಗ್ಯಾಂಗ್ ರೇಪ್ ಪ್ರಕರಣ: ದಿನೇಶ್ ಗುಂಡುರಾವ್ ಫುಲ್‌ ಗರಂ!!

ಬೆಂಗಳೂರು: ಮಧ್ಯಪ್ರದೇಶದಲ್ಲಿ ನಡೆದ ದಲಿತ ಯುವತಿ ಮೇಲಿನ ಅತ್ಯಾಚಾರ ಪ್ರಕರಣದ ಬಗ್ಗೆ ಕೇಂದ್ರ ಸರ್ಕಾರ ತಳೆದಿರುವ ನಿರ್ಲಕ್ಷ್ಯ ಧೋರಣೆ ಖಂಡಿಸಿ ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿ ಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್ ರಾಮರಾಜ್ಯ ಅಂದ್ರೆ ಇದೇನಾ ಎಂದು ಪ್ರಶ್ನಿಸಿದ್ದಾರೆ. ಪ್ರಕರಣ ಖಂಡಿಸಿರುವ ದಿನೇಶ್ ದೇಶದಲ್ಲಿನ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ಬಗ್ಗೆ ಮಾಹಿತಿ ಸಮೇತ ಬೆಳಕು ಚೆಲ್ಲಿದ್ದಾರೆ. ಮಾತು ಮಾತಿಗೂ ರಾಮರಾಜ್ಯದ ಸುಳ್ಳು ಭ್ರಮೆಯ ತೌಡು ಕುಟ್ಟುವ ಬಿಜೆಪಿ ನಾಯಕರ ಪ್ರಕಾರ ಇದೇ ನಿಜವಾದ ರಾಮರಾಜ್ಯವೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಪದೇ ಪದೇ ಸಾಂಸ್ಕೃತಿಕ ರಾಷ್ಟ್ರೀಯವಾದವನ್ನು ಪ್ರತಿಪಾದಿಸುತ್ತಾ ಕೂರುವ ನಿಮಗೆ 2018ರಿಂದ 2019ರ ಅವಧಿಯಲ್ಲಿ ಅಪರಾಧ ಪ್ರಮಾಣ 1.6% ಏರಿಕೆಯಾದ ಬಗ್ಗೆ ವರದಿ ಕಾಣುತ್ತಿಲ್ಲವೇ ಎಂದು ಪ್ರಶ್ನಿಸಿರುವ ದಿನೇಶ್ ಗುಂಡೂರಾವ್ ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣ ಇತ್ತೀಚೆಗೆ ಶೇ.7.3% ರಷ್ಟು ಏರಿಕೆಯಾಗಿದೆ ಎಂದು ದಾಖಲೆ ನೀಡಿದ್ದಾರೆ.

ದಿನೇಶ್ ಗುಂಡೂರಾವ್ ಮಾತಿಗೆ ದನಿಗೂಡಿಸಿರುವ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಉತ್ತರ ಪ್ರದೇಶದಲ್ಲಿ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯಗಳು ಆಘಾತಕಾರಿ ಮತ್ತು ಅಮಾನವೀಯ. ಈ ಘಟನೆಗಳನ್ನು ತಡೆಯಲು ಪ್ರಧಾನಿಯವರು ಮಧ್ಯಪ್ರವೇಶಿಸಬೇಕು, ಈಗಾಗಲೇ ಜನ ಆದಿತ್ಯನಾಥರ ಯುಪಿ ಆಡಳಿತದಲ್ಲಿ ನಂಬಿಕೆಯನ್ನು ಕಳೆದುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು ಯುಪಿ ತನ್ನದೇ ಆದ ಸಂವಿಧಾನವನ್ನು ಹೊಂದಿದೆಯೇ? ಈ ವಿಷಯಗಳ ಬಗ್ಗೆ ಪ್ರಧಾನಿ ಏಕೆ ಮೌನವಾಗಿದ್ದಾರೆ? ಎಂದು ಕುಟುಕಿದ್ದಾರೆ.

 

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments